ಉಡುಪಿ: ಕೋವಿಡ್ ಗೆ ಓರ್ವ ಬಲಿ, 130 ಮಂದಿಗೆ ಕೊರೋನ ಪಾಸಿಟಿವ್

Update: 2021-08-11 15:26 GMT

ಉಡುಪಿ, ಆ.11: ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಓರ್ವ ಹಿರಿಯ ನಾಗರಿಕರು ಬಲಿಯಾದರೆ, ಒಟ್ಟು 130 ಮಂದಿಯಲ್ಲಿ ಸೋಂಕು ಕಾಣಿಸಿ ಕೊಂಡಿದೆ. ದಿನದಲ್ಲಿ 166 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1205ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಕುಂದಾಪುರದ 72 ವರ್ಷ ಪ್ರಾಯದ ಹಿರಿಯ ನಾಗರಿಕರು ಮಂಗಳವಾರ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿನ ಗುಣಲಕ್ಷಣದೊಂದಿಗೆ ತೀವ್ರ ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಬಳಲುತಿದ್ದ ಇವರು ರಕ್ತದೊತ್ತಡ ಹಾಗೂ ಮಧುಮೇಹ ಕ್ಕಾಗಿ ಆ.3ಕ್ಕೆ ಚಿಕಿತ್ಸೆಗೆ ದಾಖಲಾಗಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 430ಕ್ಕೇರಿದೆ.

ಬುಧವಾರ ಕೊರೋನ ಸೋಂಕು ದೃಢಪಟ್ಟ 130 ಮಂದಿಯಲ್ಲಿ 56 ಮಂದಿ ಪುರುಷರು ಹಾಗೂ 74 ಮಂದಿ ಮಹಿಳೆಯರು. ಪಾಸಿಟಿವ್ ಬಂದವ ರಲ್ಲಿ 63 ಮಂದಿ ಉಡುಪಿ ತಾಲೂಕು, 36ಮಂದಿ ಕುಂದಾಪುರ, 30 ಮಂದಿ ಕಾರ್ಕಳ ತಾಲೂಕು ಹಾಗೂ ಒಬ್ಬರು ಹೊರಜಿಲ್ಲೆಯವರು. ಇಂದು ಪಾಸಿಟಿವ್ ಬಂದವರಲ್ಲಿ 17 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 113 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಮಂಗಳವಾರ ಒಟ್ಟು 166 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 69,531ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 6557 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 71,166ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,29,895 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಇಂದು ಸಹ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಬ್ಲ್ಯಾಕ್ ಫಂಗಸ್ ಸೋಂಕು ಇರುವ ರೋಗಿ ಪತ್ತೆಯಾಗಿಲ್ಲ. ಸದ್ಯ ಹೊರಜಿಲ್ಲೆಗಳ ಏಳು ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

14,666 ಮಂದಿಗೆ ಲಸಿಕೆ:  ಉಡುಪಿ ಜಿಲ್ಲೆಯಲ್ಲಿ ಇಂದು 14,666 ಮಂದಿಗೆ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಇವುಗಳಲ್ಲಿ 10,503 ಮಂದಿಗೆ ಮೊದಲ ಡೋಸ್ ಹಾಗೂ 4163 ಮಂದಿಗೆ ಎರಡನೇ ಡೋಸ್‌ನ್ನು ನೀಡಲಾ ಗಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

18ರಿಂದ 44ವರ್ಷದೊಳಗಿನ 7979 ಮಂದಿ ಮೊದಲ ಹಾಗೂ 2080 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 2523 ಮಂದಿಗೆ ಮೊದಲ ಹಾಗೂ 2079 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾ ಗಿದೆ. ಉಳಿದಂತೆ ಮೂವರು ಆರೋಗ್ಯ ಕಾರ್ಯ ಕರ್ತರು ಹಾಗೂ ಇಬ್ಬರು ಮುಂಚೂಣಿ ಕಾರ್ಯಕರ್ತರೂ ಲಸಿಕೆಯನ್ನು ಪಡೆದಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,58,278 ಮಂದಿಗೆ ಮೊದಲ ಡೋಸ್ ಹಾಗೂ 2,02,770 ಮಂದಿಗೆ ಎರಡನೇ ಡೋಸ್ ಲಸಿಕೆ ಯನ್ನು ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News