ಅರೆ ವೈದ್ಯಕೀಯ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ
Update: 2021-08-11 18:12 GMT
ಬೆಂಗಳೂರು, ಆ.11: ಕರ್ನಾಟಕ ನರ್ಸಿಂಗ್ ಮತ್ತು ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರದ ವತಿಯಿಂದ 2021-22ನೇ ಶೈಕ್ಷಣಿಕ ವರ್ಷಕ್ಕೆ ಅರೆ ವೈದ್ಯಕೀಯ ಡಿಪ್ಲೊಮಾ ಕೋರ್ಸ್‍ಗಳಿಗೆ ಸರಕಾರಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜುಗಳಲ್ಲಿನ ಸರಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿಗಳನ್ನು ಆ.12ರಿಂದ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆ.31ಕೊನೆಯ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅರೆ ವೈದ್ಯಕೀಯ ಮಂಡಳಿಯ ಜಾಲತಾಣ http://www.pmbkarnataka.org ಗೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.