ದ.ಕ.ಜಿಲ್ಲೆ : ಕೋವಿಡ್‌ಗೆ ಐವರು ಬಲಿ; 284 ಮಂದಿಗೆ ಕೊರೋನ ಸೋಂಕು

Update: 2021-08-16 15:45 GMT

ಮಂಗಳೂರು, ಆ.16: ದ.ಕ. ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌ನಿಂದಾಗಿ ಐವರು ಮೃತಪಟ್ಟಿದ್ದಾರೆ. ಹೊಸದಾಗಿ 284 ಮಂದಿಗೆ ಕೊರೋನ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ 333 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.3.39ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ 1,06,128 ಸೋಂಕಿತರ ಪೈಕಿ 1,01,067 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ ಒಟ್ಟು 1,506 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 3555 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News