ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದಿಂದ ವಿನೂತನ ಸ್ವಾತಂತ್ರ್ಯೋತ್ಸವ

Update: 2021-08-16 17:56 GMT

ಮಂಗಳೂರು, ಆ.16: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದಿಂದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲಾಯಿತು.

ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ ಸ್ನೇಹ ದೀಪ ಆಶ್ರಮದ ಮಕ್ಕಳಿಗೆ ಆಹಾರ ಧಾನ್ಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಶಮೀರ್ ಮುಲ್ಕಿ, ಪ್ರಧಾನ ಕಾರ್ಯದರ್ಶಿ ಸರ್ಫರಾಝ್ ಮಂಗಳೂರು, ರಾಝ್ ಕಲಾಯಿ, ನಿಫಾಲ್ ಬೆದ್ರ, ಇಂಝಮಾಮ್ ಕಲಾಯಿ, ಇರ್ಫಾನ್ ಕಲ್ಕಟ್ಟ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News