ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ಉಡುಪಿ ಬುಡೋಕಾನ್ ತಂಡಕ್ಕೆ 46 ಪದಕ

Update: 2021-08-22 14:02 GMT

ಉಡುಪಿ, ಆ.22: ಗಂಗಾವತಿ ಹಾಗೂ ಗದಗ ಜಿಲ್ಲೆಯಲ್ಲಿ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಆ್ಯಂಡ್ ಸ್ಪೋರ್ಟ್ಸ್ ಅಸೋಸಿ ಯೇಶನ್‌ನ ವಿದ್ಯಾರ್ಥಿಗಳು 46 ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಅಂಬಲಪಾಡಿ, ಕಡೆಕಾರು, ಅಲೆವೂರು ಹಾಗೂ ಚಿಟ್ಪಾಡಿ ಡೋಜೊ ಇದರ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಅಂಬಲಪಾಡಿ ದೇವಳದ ಧರ್ಮದರ್ಶಿ ಹಾಗೂ ಅಸೋಸಿಯೇಶನ್ನ ಗೌರವಾಧ್ಯಕ್ಷ ಡಾ.ನಿ.ಬೀ.ವಿಜಯ ಬಲ್ಲಾಳ್ ಪದಕ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಚಿಟ್ಪಾಡಿ ದೇವಾಡಿಗರ ಸಂಘದ ಅಧ್ಯಕ್ಷ ರತ್ನಾಕರ ದೇವಾಡಿಗ, ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪೂಜಾರಿ, ಅಂಬಲಪಾಡಿ ಗ್ರಾಪಂ ಮಾಜಿ ಉಪಾಧ್ಯಕ್ಷ ಶಿವ ಕುಮಾರ್ ಅಂಬಲಪಾಡಿ, ಅಸೋಸಿಯೇಶನ್ ಅಧ್ಯಕ್ಷ ವಾಮನ್ ಪಾಲನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News