ಉಡುಪಿ: ಆ.23ರಂದು ಕೋವಿಡ್ ಲಸಿಕೆ ಲಭ್ಯತೆಯ ಮಾಹಿತಿ

Update: 2021-08-22 15:17 GMT

ಉಡುಪಿ, ಆ.22: ಉಡುಪಿ ನಗರ ಪ್ರದೇಶ ಹಾಗೂ ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ ಆ.23ರಂದು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ ಇದೆ.

ಅಜ್ಜರಕಾಡು ಜಿಲ್ಲಾಸ್ಪತ್ರೆ(ಸೇಂಟ್ ಸಿಸಿಲಿ ಶಾಲೆ)ದಲ್ಲಿ ಅಪರಾಹ್ನ 2ರಿಂದ 4ರ ವರೆಗೆ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-100, ಕಿನ್ನಿಮುಲ್ಕಿ ವೀರಭದ್ರ ಕಲಾಭವನದಲ್ಲಿ ಬೆಳಗ್ಗೆ 9ರಿಂದ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-200, ಕಕ್ಕುಂಜೆ ಹಿಂದೂ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 9ಗಂಟೆಯಿಂದ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್- 200, ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್-250, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಳಗ್ಗೆ 9ರಿಂದ ಅಪರಾಹ್ನ 1ರವರೆಗೆ ಸೆ.30ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ -200 ಡೋಸ್ ಲಭ್ಯ ಇದೆ.

ಗ್ರಾಮೀಣ ಪ್ರದೇಶದಲ್ಲಿ 18ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು.

ಪ್ರಥಮ ಡೋಸ್ ಕೋವಿ ಶೀಲ್ಡ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2ನೆ ಡೋಸ್ ಕೋವಿ ಶೀಲ್ಡ್ ಲಸಿಕೆಯನ್ನು ಮತ್ತು ಕೋವ್ಯಾಕ್ಸಿನ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಥಮ ಆದ್ಯತೆಯ ಮೇಲೆ ನೀಡಲಾಗುವುದು ಎಂದು ಡಿಎಚ್‌ಓ ಡಾ.ನಾಗಭೂಷಣ್ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News