ಮಂಗಳೂರು ವಿವಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Update: 2021-08-23 11:50 GMT

ಕೊಣಾಜೆ: 19ನೇ ಶತಮಾನದಲ್ಲಿ ಶಿಕ್ಷಣದೊಂದಿಗೆ ಸಾಮಾಜಿಕ ಕ್ರಾಂತಿಯನ್ನು ಮಾಡುವ ಮೂಲಕ ಶೋಷಿತ ಮತ್ತು ಹಿಂದುಳಿದ ಸಮಾಜಕ್ಕೆ ಸಮಾನತೆ ಒದಗಿಸಿಕೊಟ್ಟವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಇಂತಹ ಮಹಾತ್ಮರ ತತ್ವ ಸಿದ್ದಾಂತಗಳು ನಮಗೆಲ್ಲರಿಗೂ ಆದರ್ಶವಾಗಿದೆ ಎಂದು  ಮಂಗಳೂರು ವಿವಿ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ. ಕೆ ಹೇಳಿದರು

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಸಂಯೋಜನೆಯಲ್ಲಿ ಸೋಮವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶೇಷ ಉಪನ್ಯಾಸ ನೀಡಿದ ಸಾಹಿತಿ ಮುದ್ದು ಮೂಡಬೆಳ್ಳೆ ಬ್ರಹ್ಮಶ್ರೀ ನಾರಾಯಣ ಗುರುಗಳ ಬದುಕು ಬರಹ ಚಿಂತನೆ ವಿಶ್ವಕ್ಕೆ ದಾರಿದೀಪವಾಗಿದೆ. ಅವರ ತತ್ವ ಸಂದೇಶಗಳನ್ನು ಪ್ರಸ್ತುತ ಪರಿಸ್ಥಿತಿಯಲ್ಲಿ ಅಧ್ಯಯನ ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ದಯಾಕರ ಕುಳಾಯಿ, ಕೊಣಾಜೆ ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಚಂದ್ರಹಾಸ್ ಅಮೀನ್ ಖಂಡಿಗ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ್ ಅಮೀನ್ ಸಂಕಮಾರ್ ಸ್ವಾಗತಿಸಿದರು. ರಕ್ಷಾ ಹರೀಶ್ ನಾರಾಯಣ ಗುರುಗಳ ಕುರಿತಾದ ಗೀತೆಗಳನ್ನು ಹಾಡಿದರು.

ಪೀಠದ ಸದಸ್ಯರಾದ ನಮಿತಾ ಶ್ಯಾಮ್ ವಂದಿಸಿದರು. ಸಂಶೋಧನಾ ವಿದ್ಯಾರ್ಥಿಗಳಾದ ಅನು-ಭವ ಸಂಕಮಾರ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕಾಟಿಪಳ್ಳ ನಾರಾಯಣಗುರು ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲ್ಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News