ಉಡುಪಿ: ಆ.26ರಂದು ಕೊರೋನ ಲಸಿಕೆ ಲಭ್ಯತೆ ವಿವರ

Update: 2021-08-25 15:02 GMT

ಉಡುಪಿ, ಆ.25: ಉಡುಪಿ ಜಿಲ್ಲೆಯಲ್ಲಿ ಆ.26ರಂದು ಮೊದಲ ಮತ್ತು ಎರಡನೇ ಡೋಸ್ ಕೋವಿಡ್ ಲಸಿಕೆ ಲ್ಯವಿದ್ದು, ವಿವರ ಈ ಕೆಳಕಂಡಂತಿದೆ.

ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಸೇಂಟ್ ಸಿಸಿಲಿ ಶಾಲಾ ಲಸಿಕಾ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್ ಒಟ್ಟು -300, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲೆಯಲ್ಲಿ ಕೋವಿಶೀಲ್ಡ್ ಪ್ರಥಮ ಡೋಸ್-100, 2ನೇ ಡೋಸ್ -250, ಕೋವ್ಯಾಕ್ಸಿನ್ 2 ಡೋಸ್-100, ನಗರದ ಅಲಂಕಾರ್ ಥಿಯೇಟರ್ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಶೀಲ್ಡ್ 2ನೇ ಡೋಸ್-200.

ಕಡಿಯಾಳಿಯ ಕಮಲಾಬಾಯಿ ಶಾಲೆಯಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ ಒಟ್ಟು-200, ಕುಕ್ಕಿಕಟ್ಟೆ ಎಫ್‌ಪಿಎಐನ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಶೀಲ್ಡ್ ಪ್ರಮಥ ಮತ್ತು ಎರಡನೇ ಡೋಸ್- 200, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್)ಆಸ್ಪತ್ರೆಯಲ್ಲಿ ಬೆಳಗ್ಗೆ 10:00ರಿಂದ ಅಪರಾಹ್ನ 1:00ರವರೆಗೆ ಸೆ.30ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲಭ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News