ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2021-08-29 12:42 GMT

ಉಡುಪಿ, ಆ.29: ಉತ್ತರಖಾಂಡದ ಡೆಹ್ರಾಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ನಡೆಯಲಿದೆ.

ಇದಕ್ಕಾಗಿ 7ನೇ ತರಗತಿಯಲ್ಲಿ ಓದುತ್ತಿರುವ 2022ರ ಜು.1ಕ್ಕೆ 11ವರ್ಷ 6ತಿಂಗಳಿನಿಂದ 13 ವರ್ಷದೊಳಗಿನ ಬಾಲಕರು ಮಾತ್ರ ಪ್ರವೇಶಕ್ಕೆ ಅರ್ಹರಿದ್ದಾರೆ. ಅರ್ಜಿಯನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆಪತ್ರಿಕೆಗಳ ಕಿರುಪುಸ್ತಕದೊಂದಿಗೆ ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು. ಅಥವಾ ವೆಬ್‌ಸೈಟ್:www.rimc.gov.in-ನ್ನು ಸಂಪರ್ಕಿಸಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಅ. 5ರೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ ಬೆಂಗಳೂರು-25 ಇವರಿಗೆ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News