ಆ.30ರಂದು ಬಿಜೆಪಿ ಯುವ ಮೋರ್ಚಾದಿಂದ ಕಳೆ ತೆಗೆಯುವ ಅಭಿಯಾನ

Update: 2021-08-29 12:45 GMT

ಉಡುಪಿ, ಆ.29: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ನಡೆದಿರುವ ಹಡಿಲು ಭೂಮಿ ಕೃಷಿಯ ಭತ್ತದ ಗದ್ದೆಯಲ್ಲಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಳೆ ತೆಗೆಯುವ ಅಭಿಯಾನ ಆ.30ರಂದು ಬೆಳಗ್ಗೆ 9 ಗಂಟೆಗೆ ಕೆಳ ನೇಜಾರು ಮೂಡುತೋನ್ಸೆಯಲ್ಲಿ ನಡೆಯಲಿದೆ.

ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಡಾ ಸಂದೀಪ್ ಕುಮಾರ್ ಹಾಗೂ ಖ್ಯಾತ ನಟ ನಿರ್ದೇಶಕ ರಿಷಭ್ ಶೆಟ್ಟಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾರಂಭದಲ್ಲಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ನಗರಾ ಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News