​ಜಿಪಂ, ತಾಪಂ ಚುನಾವಣೆಗಳ ಜೊತೆಗೆ ಪಕ್ಷ ಸಂಘಟನೆ: ಸಚಿವ ಸುನೀಲ್ ಕುಮಾರ್

Update: 2021-09-01 12:51 GMT

ಉಡುಪಿ, ಸೆ.1: ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಗಳ ಜೊತೆಗೆ ಪಕ್ಷ ಸಂಘಟನೆಯನ್ನು ಮಾಡಬೇಕು. ಜಿಲ್ಲೆಯಾದ್ಯಂತ ಬೂತ್ ಸಶಕ್ತೀಕರಣದ ಮೂಲಕ ಹೊಸ ಆಲೋಚನೆಗಳೊಂದಿಗೆ ವಿಸ್ತಾರವಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. ಪಾರಂಪರಿಕ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಅಗತ್ಯ ವಿದೆ. ಮುಂದಿನ ಎಲ್ಲಾ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ ಜಿಲ್ಲೆಯಲ್ಲಿ ಬಿಜೆಪಿ ವಿಕ್ರಮ ವಿಜಯದ ದಾಖಲೆಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಸಂಘಟಿತರಾಗಿ ಶ್ರಮಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News