ಚಾರ್ಮಾಡಿ: ರಸ್ತೆಗೆ ಉರುಳಿಬಿದ್ದ ಮರ; ಒಂದು ಗಂಟೆ ವಾಹನ ಸಂಚಾರ ಸ್ಥಗಿತ

Update: 2021-09-02 05:03 GMT

ಬೆಳ್ತಂಗಡಿ, ಸೆ.2: ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿ ಒಂದನೇ ಹಾಗೂ ಎರಡನೇ ತಿರುವಿನ ಮಧ್ಯೆ ಮರವೊಂದು ಉರುಳಿ ರಸ್ತೆಗೆ ಬಿದ್ದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಇದರಿಂದ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ನಿರಂತರ ಮಳೆಯಾಗುತ್ತಿರುವುದರಿಂದ ಇಂದು ಬೆಳಗ್ಗೆ 6:30ರ ಸುಮಾರಿಗೆ ಮರವೊಂದು ಉರುಳಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದ ಒಂದು ತಾಸು ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಚಾರ್ಮಾಡಿ ಹಸನಬ್ಬ ತಂಡ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News