ಉಡುಪಿ: 111 ಮಂದಿ ಕೋವಿಡ್‌ಗೆ ಪಾಸಿಟಿವ್, ಓರ್ವ ಬಲಿ

Update: 2021-09-02 14:33 GMT

ಉಡುಪಿ, ಸೆ.2: ಗುರುವಾರ ಜಿಲ್ಲೆಯಲ್ಲಿ ಮತ್ತೆ 111 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. 63 ವರ್ಷದ ಪುರುಷರೊಬ್ಬರು ಮೃತ ರಾದರೆ, 134 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ ದಿನದಲ್ಲಿ 1408ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಉಡುಪಿ ತಾಲೂಕಿನ 63 ವರ್ಷ ಪ್ರಾಯದ ಪುರುಷರೊಬ್ಬರು ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಜಿಲ್ಲೆಯಲ್ಲಿ ಮೃತರ ಸಂಖ್ಯೆ 456ಕ್ಕೇರಿದೆ. ಹೃದಯ ಕಾಯಿಲೆ, ಕಿಡ್ನಿ ಸಮಸ್ಯೆಯನ್ನು ಹೊಂದಿದ್ದ ಇವರು ಕೋವಿಡ್ ಗುಣಲಕ್ಷಣದೊಂದಿಗೆ ಉಸಿರಾಟ ತೊಂದರೆ, ನ್ಯುಮೋನಿಯಕ್ಕಾಗಿ ಆ.28ರಂದು ಚಿಕಿತ್ಸೆಗೆ ದಾಖಲಾಗಿದ್ದರು.

ಇಂದು ಕೊರೋನ ಸೋಂಕು ದೃಢಪಟ್ಟ 111 ಮಂದಿಯಲ್ಲಿ 48 ಮಂದಿ ಪುರುಷರು ಹಾಗೂ 63 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 63 ಮಂದಿ ಉಡುಪಿ ತಾಲೂಕು, 22 ಮಂದಿ ಕುಂದಾಪುರ ಹಾಗೂ 25 ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 13 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 98 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಬುಧವಾರ 134 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 72,231ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 9565 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 74,095ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 9,86,543 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.

ಜಿಲ್ಲೆಯಲ್ಲಿ ಇಂದು ಓರ್ವ ಬ್ಲ್ಯಾಕ್ ಫಂಗಸ್ ಸೋಂಕಿತ ರೋಗಿ ಗುಣಮುಖ ನಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಸದ್ಯ ಒಬ್ಬ ಮಾತ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

11,803 ಡೋಸ್ ಲಸಿಕೆ ವಿತರಣೆ: ಜಿಲ್ಲೆಯಲ್ಲಿ ಗುರುವಾರ 11,803 ಮಂದಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 8,029 ಮಂದಿ ಮೊದಲ ಡೋಸ್ ಹಾಗೂ 3774 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿ ದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

18ರಿಂದ 44ವರ್ಷದೊಳಗಿನ 5,657 ಮಂದಿ ಮೊದಲ ಹಾಗೂ 2,103 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 2372 ಮಂದಿಗೆ ಮೊದಲ ಹಾಗೂ 1637 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡ ಲಾಗಿದೆ. ಅಲ್ಲದೇ 23 ಮಂದಿ ಆರೋಗ್ಯ ಕಾರ್ಯಕರ್ತರು ಮತ್ತು 11 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಇಂದು ಎರಡನೇ ಡೋಸ್ ಪಡೆದಿದ್ದಾರೆ.

ಗುರುವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 7,81,716 ಮಂದಿ ಮೊದಲ ಡೋಸ್‌ನ್ನು ಪಡೆದರೆ, 2,77,532 ಮಂದಿ ಎರಡೂ ಡೋಸ್‌ ಗಳನ್ನು ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News