ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನಕ್ಕೆ ಮುತ್ತಿಟ್ಟ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್

Update: 2021-09-04 10:54 GMT
ಪ್ರಮೋದ್ ಭಗತ್ (Photo: Twitter/@sukant9993)

ಟೋಕಿಯೊ: ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್ (ಎಸ್ ಎಲ್ 3)ನಲ್ಲಿ ಚಿನ್ನದ ಪದಕವನ್ನು ಜಯಿಸಿದರು.

ಶನಿವಾರ ನಡೆದ ಫೈನಲ್ ನಲ್ಲಿ ಬ್ರಿಟನ್ ನ ಡೇನಿಯಲ್ ಬೆಥೆಲ್ ಅವರನ್ನು 21-14, 21-17  ಗೇಮ್ ಗಳಿಂದ ಸೋಲಿಸಿದರು.

33ರ ಹರೆಯದ ಪ್ರಮೋದ್ ವಿಶ್ವದ ನಂ.1 ಆಟಗಾರನಾಗಿದ್ದು, ಹಾಲಿ ಏಶ್ಯನ್ ಚಾಂಪಿಯನ್ ಆಗಿದ್ದಾರೆ. ಶನಿವಾರ 36 ನಿಮಿಷಗಳಲ್ಲಿ ಅಂತ್ಯಗೊಂಡ ಪುರುಷರ ಸಿಂಗಲ್ಸ್ ಎಸ್ ಎಲ್ 3 ಕ್ಲಾಸ್ ಸೆಮಿ ಫೈನಲ್ ನಲ್ಲಿ ಜಪಾನ್ ಆಟಗಾರನನ್ನು 21-11, 21-16 ಗೇಮ್ ಗಳ ಅಂತರದಿಂದ ಸೋಲಿಸಿದ್ದರು.

ಮನೋಜ್ ಸರ್ಕಾರ್ ಗೆ ಕಂಚು

ಬ್ಯಾಡ್ಮಿಂಟನ್ ನ  ಪುರುಷರ ಸಿಂಗಲ್ಸ್ ಎಸ್‌ಎಲ್ 3 ವಿಭಾಗದಲ್ಲಿ ಭಾರತದ  ಮನೋಜ್ ಸರ್ಕಾರ್ ಜಪಾನ್‌ನ ಆಟಗಾರ ಡೈಸುಕೆ ಫುಜಿಹರಾ ಅವರನ್ನು 22-20, 21-13 ಗೇಮ್ ಗಳ ಅಂತರದಿಂದ ಸೋಲಿಸಿ ಕಂಚಿನ ಪದಕ ಗೆದ್ದರು. 

ಈ ಮೂಲಕ ಪುರುಷರ ಸಿಂಗಲ್ಸ್ ಎಸ್ ಎಲ್ 3 ಕ್ಲಾಸ್ ವಿಭಾಗದಲ್ಲಿ ಭಾರತವು ಚಿನ್ನ ಹಾಗೂ ಕಂಚಿನ ಪದಕ ತನ್ನದಾಗಿಸಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News