ದ.ಕ.-ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ

Update: 2021-09-04 12:19 GMT

ಮಂಗಳೂರು, ಸೆ.4: ದ.ಕ. ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜತೆ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿ ಸಮಾಲೋಚನೆ ನಡೆಸಿದರು.

ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧೃವನಾರಾಯಣ್, ವಿಧಾನ ಪರಿ ಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಅಭಯಚಂದ್ರ ಜೈನ್, ಎಐಸಿಸಿ ಕಾರ್ಯದರ್ಶಿಗಳಾದ ಪಿ.ವಿ ಮೋಹನ್, ಐವನ್ ಡಿಸೋಜ, ಶಾಸಕ ಯು.ಟಿ. ಖಾದರ್, ಮಾಜಿ ಶಾಸಕರಾದ, ಶಕುಂತಳಾ ಶೆಟ್ಟಿ. ಮೊಯ್ದಿನ್ ಬಾವ, ಜೆ.ಆರ್ ಲೋಬೊ, ಪಕ್ಷದ ಮುಖಂಡರಾದ ರಾಕೇಶ್ ಮಲ್ಲಿ, ಅಶೋಕ್ ಕೊಡವೂರ್, ಡಾ.ರಘು, ಗೋಪಾಲ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News