ಸೆ.4ರಂದು ಆದಿಉಡುಪಿಯಲ್ಲಿ ಲಸಿಕೆ ವಿತರಣೆ

Update: 2021-09-04 14:48 GMT

ಉಡುಪಿ, ಸೆ.4: ಉಡುಪಿ ನಗರದ ಆದಿಉಡುಪಿಯ ಮಸ್ಜಿದ್-ಏ- ನೂರುಲ್ ಇಸ್ಲಾಂ ಮಸೀದಿಯಲ್ಲಿ ರವಿವಾರ ಬೆಳಗ್ಗೆ 9:00ರಿಂದ ಅಪರಾಹ್ನ 1:00ರವರೆಗೆ ಕೋವಿಶೀಲ್ಡ್ ಪ್ರಥಮ ಹಾಗೂ ಎರಡನೇ ಡೋಸ್ ಲಸಿಕೆ ಲಭ್ಯವಿದೆ. ಇಲ್ಲಿ ಒಟ್ಟು 350 ಡೋಸ್ ಲಸಿಕೆಯನ್ನು ವಿತರಿಸಲಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆಯ ಲಭ್ಯತೆಯನ್ನು ಖಚಿತ ಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News