ಕ್ರೀಡಾಕೂಟದಿಂದ ಮಾನಸಿಕ ಸದೃಢತೆ, ದೈಹಿಕ ಸಾಮರ್ಥ್ಯ ಹೆಚ್ಚಳ: ಸಚಿವ ಸುನೀಲ್ ಕುಮಾರ್

Update: 2021-09-06 11:56 GMT

ಉಡುಪಿ, ಸೆ.6: ಕ್ರೀಡಾಕೂಟಗಳ ಮೂಲಕ ಮಾನಸಿಕ ಸದೃಢತೆ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಕಾರ್ಯ ಜೊತೆ ಜೊತೆಯಾಗಿ ನಡೆಯುತ್ತದೆ. ಕೇವಲ ಬಹುಮಾನ ಗಳಿಕೆ ಮಾತ್ರವಲ್ಲದೆ ಮಾನಸಿಕ ಸದೃಢತೆ ಕೂಡ ಕ್ರೀಡೆಯಲ್ಲಿ ಮುಖ್ಯವಾಗಿರುತ್ತದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆ, ಮಣಿಪಾಲ ಮಾಹೆ ಹಾಗೂ ನಿಟ್ಟೆ ವಿದ್ಯಾ ಸಂಸ್ಥೆಗಳ ಸಹಯೋಗದೊಂದಿಗೆ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣ ದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಕರ್ನಾಟಕ ರಾಜ್ಯ ಹಿರಿಯರ ಹಾಗೂ ಕಿರಿಯರ 23ರ ವಯೋಮಿತಿಯ ಪುರುಷ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನ್ನು ಸೋಮವಾರ ಉ್ಘಾಟಿಸಿ ಅವರು ಮಾತ ನಾಡುತಿದ್ದರು.

ಕೇಂದ್ರ ಸರಕಾರ ಕ್ರೀಡಾ ಚಟುವಟಿಕೆಗಳಿಗೆ ಬೇಕಾದ ಎಲ್ಲ ರೀತಿಯ ಅವಕಾಶ ಗಳನ್ನು ನೀಡುತ್ತಿದೆ. ಅದೇ ರೀತಿ ಕ್ರೀಡಾ ಕ್ಷೇತ್ರವು ಕ್ರೀಡಾ ಪಟುಗಳಿಗೆ ಹೊಸ ರೀತಿಯಲ್ಲಿ ತೆರೆದುಕೊಳ್ಳಬೇಕಾದ ನಿಟ್ಟಿನಲ್ಲಿ ಹಲವು ಪ್ರಯೋಗಗಳನ್ನು ನಡೆಸ ಲಾಗುತ್ತಿದೆ. ಈ ಮೂಲಕ ಈ ಬಾರಿಯ ಒಲಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ವಿಶಿಷ್ಟ ಸಾಧನೆ ಮಾಡುವುದರೊಂದಿಗೆ ಭಾರತದ ಕ್ರೀರ್ತಿ ಯನ್ನು ಹೆಚ್ಚಿಸುವ ಕಾರ್ಯ ಮಾಡಿದ್ದಾರೆ ಎಂದರು.

ಅಧ್ಯಕ್ಷತೆಯನ್ನು ಮಣಿಪಾಲ ಮಾಹೆಯ ಪ್ರೊಚಾನ್ಸೆಲರ್ ಡಾ.ಎಚ್.ಎಸ್. ಬಲ್ಲಾಳ್ ವಹಿಸಿದ್ದರು. ಮಾಹೆ ಕುಲಪತಿ ಎಂ.ಡಿ.ವೆಂಕಟೇಶ್, ಎನ್‌ಇಬಿ ಸ್ಪೋರ್ಟ್ಸ್ ಬೆಂಗಳೂರು ಇದರ ಆಡಳಿತ ನಿರ್ದೇಶಕ ನಾಗರಾಜ ಅಡಿಗ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ಕಾರ್ಯದರ್ಶಿ ರಾಜವೇಲು, ಅಂತಾರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ ನಾಚಪ್ಪ, ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ಮುಖ್ಯ ಅತಿಥಿ ಗಳಾಗಿದ್ದರು.

ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕೆಂಪರಾಜ್ ಎಚ್.ಬಿ., ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಗೌರವ ಸಲಹೆಗಾರ ಅಶೋಕ್ ಅಡ್ಯಂತಾಯ, ಮೀಟ್‌ನ ಸಂಘಟನಾ ಕಾರ್ಯದರ್ಶಿ ಮಹೇಶ್ ಠಾಕೂರ್ ಮೊದಲಾದವರು ಉಪಸ್ಥಿತರಿದ್ದರು.

ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡಾಪಟು ಕರಿಷ್ಮಾ ಸನಿಲ್ ಪ್ರತಿಜ್ಞಾ ವಿಧಿ ಭೋದಿಸಿದರು. ಅಸೋಸಿಯೇಶನ್ ಕಾರ್ಯದರ್ಶಿ ದಿನೇಶ್ ಕುಮಾರ್ ಸ್ವಾಗತಿಸಿದರು. ಬಾಲಕೃಷ್ಣ ಮದ್ದೋಡಿ ಕಾರ್ಯ ಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News