ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮನವಿ

Update: 2021-09-06 12:11 GMT

ಮಂಗಳೂರು, ಸೆ.6: 2005-06ನೇ ಸಾಲಿನಲ್ಲಿ ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸ ಬೇಕೆಂದು ಶಿಕ್ಷಕರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಶಿಕ್ಷಕರ ದಿನಾಚರಣೆ ಅಂಗವಾಗಿ ಮಂಗಳೂರಿನಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಎಸ್. ಅಂಗಾರ ಹಾಗೂ ಶಾಸಕರಾದ ವೇದವ್ಯಾಸ ಕಾಮತ್, ಯುಟಿ ಖಾದರ್‌ಗೆ ಸಲ್ಲಿಸಿದ ಮನವಿಯಲ್ಲಿ ಶಿಕ್ಷಕರು ರಾಜ್ಯದಲ್ಲಿ ಸುಮಾರು 4,725 ಶಿಕ್ಷಕರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಸ್ತುತ ಕೇಂದ್ರ ಸರಕಾರದ ಪಿಂಚಣಿ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ ಹಾಗೂ ಕರ್ನಾಟಕ ಸರಕಾರದ ನಡಾವಳಿ ಪ್ರಕಾರ ತಮ್ಮನ್ನು ಹಳೆ ನಿಶ್ಚಿತ ಪಿಂಚಣಿ ಯೋಜನೆಯಡಿ ಪರಿಗಣಿಸಬೇಕು ಎಂದು ಉಲ್ಲೇಖಿಸಿದ್ದಾರೆ.

ಹೊಸ ಪಿಂಚಣಿ ಯೋಜನೆಯ ಪ್ರಕಾರ ತಮ್ಮ ವೇತನದಲ್ಲಿ ಕಡಿತಗೊಂಡಿರುವ ಹಣವನ್ನು ಮರುಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಕರು ಮನವಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News