ದ.ಕ. ಜಿಲ್ಲೆ : ಕೋವಿಡ್‌ಗೆ ಇಬ್ಬರು ಬಲಿ; 258 ಮಂದಿಗೆ ಸೋಂಕು

Update: 2021-09-06 15:28 GMT

ಮಂಗಳೂರು, ಸೆ.6: ದ.ಕ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಇಬ್ಬರು ಮೃತಪಟ್ಟಿದ್ದು, 258 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ 227 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.2.38ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ 1,11,316 ಸೋಂಕಿತರ ಪೈಕಿ 1,07,584 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ ಇಲ್ಲಿಯವರೆಗೆ 1,596 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 2136 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News