​ಉಡುಪಿ: 86 ಮಂದಿಯಲ್ಲಿ ಕೋವಿಡ್ ಪಾಸಿಟಿವ್

Update: 2021-09-11 15:54 GMT

ಉಡುಪಿ, ಸೆ.11: ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸೋಂಕಿಗೆ ಪಾಸಿಟಿವ್ ದೃಢಗೊಂಡವರ ಸಂಖ್ಯೆ 86 ಆಗಿದೆ. ಇಂದು ಸಹ ಸೋಂಕಿಗೆ ಯಾರೂ ಬಲಿಯಾಗಿಲ್ಲ. ಇಂದು ಒಟ್ಟು 4754 ಮಂದಿಯನ್ನು ಕೋವಿಡ್ ಪರೀಕ್ಷೆ ಗೊಳಪಡಿಸಿದ್ದು, ಇವರಲ್ಲಿ 86 ಮಂದಿಯಲ್ಲಿ ಮಾತ್ರ ಸೋಂಕು ದೃಢಪಟ್ಟಿದೆ.

ದಿನದಲ್ಲಿ 91 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಸೋಂಕಿಗೆ ಸಕ್ರಿಯ ರಾಗಿರುವವರ ಸಂಖ್ಯೆ 1478ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ದೃಢಪಟ್ಟ 86 ಮಂದಿಯಲ್ಲಿ 48 ಮಂದಿ ಪುರುಷರಾದರೆ, 38 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 48 ಮಂದಿ ಉಡುಪಿ ತಾಲೂಕು, 23 ಮಂದಿ ಕುಂದಾಪುರ ಹಾಗೂ 13 ಮಂದಿ ಕಾರ್ಕಳ ತಾಲೂಕಿನವರು. ಹೊರಜಿಲ್ಲೆಯ ಇಬ್ಬರು ಪಾಸಿಟಿವ್ ಬಂದಿದ್ದಾರೆ. ಇಂದು 22 ಮಂದಿಯನ್ನು ಕೋವಿಡ್ ಆಸ್ಪತ್ರೆಗೆ ಸೇರಿಸಿದರೆ, 64 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಶುಕ್ರವಾರ 91 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 73,109ಕ್ಕೇರಿದೆ. ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 75,040ಕ್ಕೇರಿದೆ. ಇಂದಿನವರೆಗೆ ಜಿಲ್ಲೆಯಲ್ಲಿ ಒಟ್ಟು 10,43,897 ಮಂದಿಯನ್ನು ಕೋವಿಡ್ ಪರೀಕ್ಷೆ ಗೊಳಪಡಿಸಲಾಗಿದೆ.

5694 ಡೋಸ್ ಲಸಿಕೆ ವಿತರಣೆ: ಜಿಲ್ಲೆಯಲ್ಲಿ ಶನಿವಾರ 5694 ಮಂದಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 2724 ಮಂದಿ ಮೊದಲ ಡೋಸ್ ಹಾಗೂ 2970 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

18ರಿಂದ 44ವರ್ಷದೊಳಗಿನ 1944 ಮಂದಿ ಮೊದಲ ಹಾಗೂ 1902 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 780 ಮಂದಿಗೆ ಮೊದಲ ಹಾಗೂ 1068 ಮಂದಿಗೆ ಎರಡೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಶನಿವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 8,30,918 ಮಂದಿ ಮೊದಲ ಡೋಸ್‌ನ್ನು ಪಡೆದರೆ, 3,09,807 ಮಂದಿ ಎರೂ ಡೋಸ್‌ಗಳನ್ನು ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News