ಉಡುಪಿ: 75 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢ

Update: 2021-09-13 15:18 GMT

ಉಡುಪಿ, ಸೆ.14: ಸೋಮವಾರ ಜಿಲ್ಲೆಯಲ್ಲಿ 75 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ಇಂದು 62 ಮಂದಿ ಸೋಂಕಿನಿಂದ ಚೇತರಿಸಿ ಕೊಂಡರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1514ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಯಾರೂ ಸೋಂಕಿಗೆ ಬಲಿಯಾಗಿಲ್ಲ. ಇಂದು ಸೋಂಕು ದೃಢಪಟ್ಟ 75 ಮಂದಿಯಲ್ಲಿ 35 ಮಂದಿ ಪುರುಷರು ಹಾಗೂ 40 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 42 ಮಂದಿ ಉಡುಪಿ ತಾಲೂಕು, 10 ಮಂದಿ ಕುಂದಾಪುರ ಹಾಗೂ 21 ಮಂದಿ ಕಾರ್ಕಳ ತಾಲೂಕಿ ನವರು. ಉಳಿದಿಬ್ಬರು ಹೊರಜಿಲ್ಲೆಯವರೂ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 15 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 60 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ರವಿವಾರ 62 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 73,229ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 6078 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 75,202ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 10,53,231 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.

15,279 ಮಂದಿಗೆ ಲಸಿಕೆ ವಿತರಣೆ: ಜಿಲ್ಲೆಯಲ್ಲಿ ಸೋಮವಾರ 15279 ಮಂದಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 5775 ಮಂದಿ ಮೊದಲ ಡೋಸ್ ಹಾಗೂ 9504 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

18ರಿಂದ 44ವರ್ಷದೊಳಗಿನ 3806 ಮಂದಿ ಮೊದಲ ಹಾಗೂ 3408 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 1969 ಮಂದಿಗೆ ಮೊದಲ ಹಾಗೂ 6096 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಸೋಮವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 8,37,504 ಮಂದಿ ಮೊದಲ ಡೋಸ್‌ನ್ನು ಪಡೆದರೆ, 3,20,013 ಮಂದಿ ಎರಡೂ ಡೋಸ್‌ಗಳನ್ನು ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News