ಹೊಸ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣಕ್ಕೆ ಮಹತ್ವ: ಶ್ರೀಕಾಂತ್

Update: 2021-09-14 16:17 GMT

ಉಡುಪಿ, ಸೆ.14: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಹೊಸ ಶಿಕ್ಷಣ ನೀತಿಯಲ್ಲಿ ಕೌಶಲ್ಯ ಕಲಿಕೆಗೆ ಪ್ರಧಾನ ಸ್ಥಾನ ನೀಡಲಾಗಿದೆ. ಇದರಿಂದ ದೈಹಿಕ ಶಿಕ್ಷಣಕ್ಕೆ ಮಹತ್ವ ಸ್ಥಾನ ಸಿಗಲಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಶ್ರೀಕಾಂತ್ ಹೇಳಿದ್ದಾರೆ.

ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇವುಗಳ ದೈಹಿಕ ಶಿಕ್ಷಣ ವಿಭಾಗಗಳ ಆಶ್ರಯದಲ್ಲಿ ನಡೆದ ’ಹೊಸ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣ’ ಎಂಬ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಲ್ಲಿ ಅವರು ಮಾತನಾಡುತ್ತಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಕಿಶೋರ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಹೊಸ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣದ ಪಾತ್ರದ ಕುರಿತು ವಿವರಿಸಿದರು.

ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರೆ, ಡಾ.ರೋಶನ್ ಕುಮಾರ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಡಾ. ಎಚ್.ಕೆ. ವೆಂಕಟೇಶ್ ವಂದಿಸಿ, ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News