ಉಡುಪಿ: ಸೆ.16ರಂದು ಲಸಿಕೆ ಲಭ್ಯತೆ ವಿವರ

Update: 2021-09-15 15:08 GMT

ಉಡುಪಿ, ಸೆ.15: ಗುರುವಾರ ಸೆ.16ರಂದು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಮತ್ತು ಎರಡನೇ ಡೋಸ್ ಕೋವಿಡ್ ಲಸಿಕೆ ಲಭ್ಯವಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಉಡುಪಿ ನಗರ ಪ್ರದೇಶದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-150, ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಪ್ರಥಮ ವುತ್ತು 2ನೇ ಡೋಸ್- 150 ಲಭ್ಯವಿದೆ.

ಅಲ್ಲದೇ ಅ.15ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳ ಗಡುವು ಮೀರಿದವರಿಗೆ ಎರಡನೇ ಡೋಸ್ ಲಸಿಕೆಯನ್ನು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪಡೆಯಬಹುದು ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News