ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ?

Update: 2021-09-19 07:11 GMT

ಪ್ರಯಾಗರಾಜ್: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಾನೇ  ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುತ್ತಾರೆ ಎಂದು  ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು ಹೇಳಿದರು.

"ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನಾಯಕತ್ವದಲ್ಲಿ ಸ್ಪರ್ಧಿಸಲಿದೆ ಹಾಗೂ  ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತಾರೋ, ಇಲ್ಲವೋ ಎನ್ನುವುದನ್ನು ಸ್ವತಃ ಅವರೇ ನಿರ್ಧರಿಸುತ್ತಾರೆ" ಎಂದು ಶನಿವಾರ ಪ್ರಯಾಗರಾಜ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಖುರ್ಷಿದ್ ಹೇಳಿದರು.

ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. 403 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷವು ಶೇಕಡಾ 39.67 ರಷ್ಟು ಮತಗಳನ್ನು ಪಡೆದುಕೊಂಡಿದೆ. ಸಮಾಜವಾದಿ ಪಕ್ಷ (ಎಸ್ಪಿ) 47 ಸ್ಥಾನಗಳನ್ನು, ಬಿಎಸ್ಪಿ 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ ಏಳು ಸ್ಥಾನಗಳನ್ನು ಮಾತ್ರ ಗೆಲ್ಲಲು ಶಕ್ತವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News