ರಾಹುಲ್ ಗಾಂಧಿಯೊಂದಿಗೆ ಚರ್ಚಿಸಿದ ನಂತರ ಪಂಜಾಬ್ ಸಂಪುಟ ಅಂತಿಮ: ಮೂಲಗಳು
Update: 2021-09-25 06:44 GMT
ಹೊಸದಿಲ್ಲಿ: ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಪಂಜಾಬ್ ನ ನೂತನ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ಸುದೀರ್ಘ ಚರ್ಚೆ ನಡೆಸಿದ ಬಳಿಕ ತನ್ನ ಸಚಿವ ಸಂಪುಟಕ್ಕೆ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು NDTV ವರದಿ ಮಾಡಿದೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ರಾಜೀನಾಮೆ ಬಳಿಕ ದಲಿತ ಸಿಖ್ ಚರಣ್ ಜೀತ್ ಅವರು ಸೋಮವಾರ ಪಂಜಾಬಿನ ನೂತನ ಸಿಎಂ ಆಗಿ ನೇಮಕಗೊಂಡಿದ್ದರು. ಚರಣ್ ಜೀತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೂರು ಬಾರಿ ದಿಲ್ಲಿಗೆ ಆಗಮಿಸಿ ಕಾಂಗ್ರೆಸ್ ಹೈಕಮಾಂಡ್ ನೊಂದಿಗೆ ಸಚಿವ ಸಂಪುಟ ರಚನೆಯ ಕುರಿತಾಗಿ ಚರ್ಚಿಸಿದ್ದರು.