ಹವಾಮಾನ ಆಧಾರಿತ ಕೃಷಿ ಸಲಹೆಗಳು
Update: 2021-10-13 17:14 GMT
ಬೆಂಗಳೂರು, ಅ. 13: ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಮುಂದಿನ 2-3 ದಿನಗಳಲ್ಲಿ ಮೋಡಕವಿದ ವಾತಾವರಣ ಮತ್ತು ಹಗುರದಿಂದ ಸಾದಾರಣ ಮಳೆಯ ಮುನ್ಸೂಚನೆ ಇರುವುದರಿಂದ ಭತ್ತದ ಬೆಳೆ ಬೆಂಕಿರೋಗಕ್ಕೆ ತುತ್ತಾಗುವ ಸಾದ್ಯತೆ ಹೆಚ್ಚಾಗಿರುತ್ತದೆ.
ಇದರ ಮುನ್ನೆಚ್ಚರಿಕೆ ಕ್ರಮವಾಗಿ ಟ್ರೈಸೈಕ್ಲೋಜೋಲ್ 0.6 ಗ್ರಾಂ/ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸಿ ಮತ್ತು ಸಾರಜನಕವನ್ನು ಮೇಲು ಗೊಬ್ಬರವಾಗಿ ಕೊಡುವುದನ್ನು ಕೆಲ ದಿನಗಳ ಕಾಲ ಮುಂದೂಡುವುದು ಉತ್ತಮ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.