ಕ್ರಿಕೆಟಿಗ ಯುವರಾಜ್‌ ಸಿಂಗ್‌ ಬಂಧನ, ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ

Update: 2021-10-17 17:18 GMT

ಹೊಸದಿಲ್ಲಿ: ಸಾಮಾಜಿಕ ತಾಣ ಇನ್‌ ಸ್ಟಾಗ್ರಾಂ ನಲ್ಲಿ ಇನ್ನೊಬ್ಬ ಭಾರತೀಯ ತಂಡದ ಕ್ರಿಕೆಟಿಗನನ್ನು ಉಲ್ಲೇಖಿಸುವಾಗ ಜಾತಿ ನಿಂದನೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಹರ್ಯಾನದ ಹನ್ಸಿ ಪೊಲೀಸರು ಕ್ರಿಕೆಟಿಗ ಯುವರಾಜ್‌ ಸಿಂಗ್‌ ರನ್ನು ಬಂಧಿಸಿದ್ದಾರೆ. ಬಳಿಕ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಹನ್ಸಿ ಮೂಲದ ನಿವಾಸಿ ರಜತ್ ಕಲ್ಸನ್, ಯುವರಾಜ್ ಸಿಂಗ್ ವಿರುದ್ಧ ಐಪಿಸಿ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಬಂಧನದ ನಂತರ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಪೊಲೀಸರು ಈಗಾಗಲೇ ಯುವರಾಜ್‌ ಸಿಂಗ್‌ ರ ಫೋನ್ ಅನ್ನು ವಶಪಡಿಸಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News