ರಾಜ್ಯ ಹೈಕೋರ್ಟ್‍ನಲ್ಲಿ ಖಾಲಿ ಇರುವ 150 ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2021-10-29 14:02 GMT

ಬೆಂಗಳೂರು, ಅ.29: ರಾಜ್ಯ ಹೈಕೋರ್ಟ್‍ನಲ್ಲಿ ಖಾಲಿ ಇರುವ 150 ಬೆರಳಚ್ಚುಗಾರ (ಟೈಪಿಸ್ಟ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ-ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಲೆ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ(ಬ್ಯುಸಿನೆಸ್ ಮ್ಯಾನೇಜ್ಮೆಂಟ್) ಹಾಗೂ ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯಗಳಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳು ಶೇ.55ರಷ್ಟು ಅಂಕ ಗಳಿಸಿರಬೇಕು. ಎಸ್ಸಿ-ಎಸ್ಟಿ ಅಭ್ಯರ್ಥಿಗಳು ಶೇ.50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಅದೇ ರೀತಿ ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರ ಜತೆಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

ವೇತನ-ಅಂಗೀಕೃತ ಭತ್ತೆಗಳೊಂದಿಗೆ 25,500 ರಿಂದ 81,100 ರೂ(ದರ್ಜೆ -4) ವಯೋಮಿತಿ-ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕದಂದು 18 ವರ್ಷ ಪೂರೈಸಿರಬೇಕು. ಎಸ್ಸಿ-ಎಸ್ಟಿ, ಪ್ರವರ್ಗ-1 ರ ಅಭ್ಯರ್ಥಿಗಳು 40 ವರ್ಷ ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 28 ವರ್ಷ ಮೀರಿರಬಾರದು. ಸಾಮಾನ್ಯ ಅಭ್ಯರ್ಥಿಗಳು 35 ವರ್ಷ ವಯಸ್ಸು ದಾಟಿರಬಾರದು.

ಅರ್ಜಿಗಳನ್ನು ಆನ್‍ಲೈನ್ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ನವೆಂಬರ್ ಆಗಿದ್ದು, ಶುಲ್ಕ ಪಾವತಿಗೆ ನವೆಂಬರ್ 30 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹೈಕೋರ್ಟ್ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News