ಗುಜರಾತ್: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಹಲ್ಲೆ; ಐವರು ಆರೋಪಿಗಳ ಬಂಧನ
Update: 2021-10-30 07:12 GMT
ಅಹಮದಾಬಾದ್: ಗುಜರಾತ್‌ನ ಕಚ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ 20 ಜನರ ಗುಂಪು ದಲಿತ ಕುಟುಂಬದ ಆರು ಸದಸ್ಯರ ಮೇಲೆ ಹಲ್ಲೆ ನಡೆಸಿದೆ ಎಂದು 'ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ. ಶುಕ್ರವಾರದ ವೇಳೆಗೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಮಾರಂಭವೊಂದರ ವೇಳೆ ದೇವಸ್ಥಾನದೊಳಗೆ ಪ್ರವೇಶಿಸಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಿ ಹಲ್ಲೆ ನಡೆಸಲಾಗಿತ್ತು ಎಂದು ದಲಿತ ಕುಟುಂಬ ಆರೋಪಿಸಿದೆ.
ಆರೋಪಿಗಳು ದೇವಸ್ಥಾನಕ್ಕೆ ಪ್ರವೇಶಿಸದಂತೆ ಎಚ್ಚರಿಕೆ ನೀಡಿದ್ದರು ಎಂದು ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಗೋವಿಂದ್ ವಘೇಲಾ ಹೇಳಿದ್ದಾರೆ. ಆದರೆ ನಾವು ದೇವಸ್ಥಾನಕ್ಕೆ ಹೋಗಿ ಧಾರ್ಮಿಕ ಕ್ರಿಯೆಗಳಲ್ಲಿ ಹಾಜರಾಗಿದ್ದೆವು. ನಂತರ ಆರೋಪಿಗಳು ಕುಟುಂಬದ ಮೇಲೆ ದಾಳಿ ನಡೆಸಲು ಸಭೆ ನಡೆಸಿದರು ಎಂದು ವರದಿಯಾಗಿದೆ.