ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

Update: 2021-11-03 16:11 GMT

ಹೊಸದಿಲ್ಲಿ, ನ.3: ಸುಲಕ್ಷಣಾ ನಾಯಕ್ ಹಾಗೂ  ಆರ್‌.ಪಿ. ಸಿಂಗ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಬುಧವಾರ ಅವಿರೋಧವಾಗಿ ರಾಹುಲ್ ದ್ರಾವಿಡ್ ಅವರನ್ನು ಭಾರತದ ಪುರುಷರ ಹಿರಿಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.

ಯುಎಇಯಲ್ಲಿ ಸೌರವ್ ಗಂಗುಲಿ ಹಾಗೂ  ಜಯ ಶಾ ಅವರೊಂದಿಗೆ ಮಾತುಕತೆ ನಡೆಸಿದ ನಂತರ ದ್ರಾವಿಡ್ ಭಾರತದ ಮುಖ್ಯ ಕೋಚ್ ಪಾತ್ರವನ್ನು ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಈ  ಮೊದಲು ವರದಿಯಾಗಿತ್ತು.

ದ್ರಾವಿಡ್ ಇತ್ತೀಚೆಗೆ ಹುದ್ದೆಗೆ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದರು, ಆದರೆ ಇದು ಕೇವಲ ಔಪಚಾರಿಕವಾಗಿ ಬಿಸಿಸಿಐ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಭಾರತದ ಮಾಜಿ ನಾಯಕ ನ್ಯೂಝಿಲ್ಯಾಂಡ್ ವಿರುದ್ಧ ಮುಂಬರುವ ಸ್ವದೇಶಿ ಸರಣಿಯಿಂದ ಕೋಚ್ ಹುದ್ದೆ ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ  ತಿಳಿಸಿದೆ.

ಈಗ ನಡೆಯುತ್ತಿರುವ ಐಸಿಸಿ ಟ್ವೆಂಟಿ- 20 ವಿಶ್ವಕಪ್ ನಂತರ ರವಿ ಶಾಸ್ತ್ರಿ ಅವರ ಉತ್ತರಾಧಿಕಾರಿಯನ್ನು ನೇಮಿಸಲು ಬಿಸಿಸಿಐ ಅಕ್ಟೋಬರ್ 26 ರಂದು ಕೋಚ್  ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿತ್ತು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News