ಉಡುಪಿ: ನ.11ಕ್ಕೆ ಪದ್ಮವಿಭೂಷಣ ಪೇಜಾವರಶ್ರೀಗೆ ಸ್ವಾಗತ

Update: 2021-11-09 15:30 GMT

ಉಡುಪಿ, ನ.9: ಭಾರತ ಸರಕಾರದಿಂದ ಶ್ರೀವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ನ.11ರ  ಸಂಜೆ ಉಡುಪಿಯಲ್ಲಿ ಗೌರವ ಪೂರ್ವಕವಾಗಿ ಸ್ವಾಗತಿಸಲಾ ಗುವುದು.

ಅಂದು ಸಂಜೆ 4:30ಕ್ಕೆ ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀವಿಶ್ವೇಶತೀರ್ಥರ ಭಾವಚಿತ್ರದೊಂದಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಇಟ್ಟು ಸಾಂಪ್ರದಾಯಿಕ ಬಿರುದಾವಳಿ ಚಂಡೆ ವಾದ್ಯಮೇಳಗಳ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಶ್ರೀಕೃಷ್ಣ ಮಠಕ್ಕೆ ತರಲಾಗುವುದು. ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಕೃಷ್ಣ ದೇವರಿಗೆ ಅರ್ಪಿಸಿದ ಬಳಿಕ ಅದನ್ನು ಪೇಜಾವರ ಮಠಕ್ಕೆ ತರಲಾಗುವುದು.

ಪೇಜಾವರ ಮಠದಲ್ಲಿ ಗುರುಗಳ ಪೀಠದಲ್ಲಿಟ್ಟು ಅರ್ಪಿಸಿದ ಬಳಿಕ ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥರು ಸೇರಿದಂತೆ ವಿವಿಧ ಮಠಾಧೀಶರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಸಭೆಯೊಂದು ಪೇಜಾವರ ಮಠದ ಮುಂಭಾಗ ದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News