ನ.15ರಿಂದ ಉಡುಪಿ ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳ ಪ್ರವಾಸ

Update: 2021-11-09 15:59 GMT

ಉಡುಪಿ, ನ.9: ರಾಜ್ಯದ ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಅವರು ನ.15ರಿಂದ 18ರವರೆಗೆ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ.15ರ ಸಂಜೆ 5 ಗಂಟೆಗೆ ಉಡುಪಿಗೆ ಆಗಮಿಸುವ ಅವರು ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನ.16ರ ಬೆಳಗ್ಗೆ 10 ರಿಂದ ಅಪರಾಹ್ನ 1 ಗಂಟೆಯವರೆಗೆ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳು ಮತ್ತು ಕೋವಿಡ್ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. 2:30ರಿಂದ 4 ರ ವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಕೊರ್ಗಿಯಲ್ಲಿ ವಾಸ್ತವ್ಯ ಮಾಡುವರು.

ನ.17ರಂದು ಸಂಜೆ 4:30ರಿಂದ 5:30ರವರೆಗೆ ಜಿಲ್ಲೆಯ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ, ನಂತರ ಕೊರ್ಗಿಯಲ್ಲಿ ವಾಸ್ತವ್ಯ. ನವೆಂಬರ್ 18ರಂದು ಬೆಳಗ್ಗೆ 10:45ಕ್ಕೆ ಮಂಗಳೂರು ಮೂಲಕ ಬೆಂಗಳೂರಿಗೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News