ಪ್ರತ್ಯೇಕ ಪ್ರಕರಣ: ಮೂವರು ಆತ್ಮಹತ್ಯೆ

Update: 2021-11-11 18:01 GMT

ಕಾರ್ಕಳ, ನ.11: ಅನಾರೋಗ್ಯದಿಂದ ಬಳಲುತ್ತಿದ್ದ ನಲ್ಲೂರು ಗಣಪತಿ ಕಟ್ಟೆ ಬಳಿಯ ನಿವಾಸಿ ಜಗದೀಶ್ ರಾವ್(48) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ನ.10ರಂದು ಬೆಳಗಿನ ಜಾವ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಮದ್ಯಪಾನ ಮಾಡುವ ಚಟ ಹೊಂದಿದ್ದ ಬಳ್ಕೂರು ಗ್ರಾಮದ ದೊಡ್ಮನೆಬೆಟ್ಟು ನಿವಾಸಿ ಚಂದ್ರ ಮೊಗವೀರ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.10ರಂದು ಮಧ್ಯಾಹ್ನ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಪತ್ನಿ ಹಾಗೂ ಮಕ್ಕಳು ಮನೆ ಬಿಟ್ಟು ಹೋದ ವಿಚಾರದಲ್ಲಿ ಮಾನಸಿಕವಾಗಿ ನೊಂದು ನ.8ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಾಬಲ ಪೂಜಾರಿ ಎಂಬವರು ನ.10ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News