ವಿವಿಧ ಯೋಜನೆಗಳ ಪ್ರಯೋಜನಕ್ಕೆ ಅರ್ಜಿ ಆಹ್ವಾನ

Update: 2021-11-12 17:03 GMT

ಮಂಗಳೂರು, ನ.12: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರ ಪ್ರೋತ್ಸಾಹಧನ ಹಾಗೂ ಅಂತರ್ಜಾತಿ ವಿವಾಹ, ಪರಿಶಿಷ್ಟ ಜಾತಿ ಸಮುದಾಯದೊಳಗೆ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ, ಸಾಮೂಹಿಕ ಸರಳ ವಿವಾಹ ಯೋಜನೆ, ವಿಧವಾ ಮರು ವಿವಾಹಕ್ಕೆ ಪ್ರೋತ್ಸಾಹಧನ ಹಾಗೂ ದೇವದಾಸಿಯರ ಮಕ್ಕಳ ವಿವಾಹಕ್ಕೆ ಪ್ರೋತ್ಸಾಹಧನ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇಲಾಖಾ ವೆಬ್‌ಸೈಟ್:www.sw.kar.nic.in ನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಉರ್ವಸ್ಟೋರ್ ಹತ್ತಿರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ, ದೂ.ಸಂ.: 0824-2451237, ಮಂಗಳೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂಸಂ.ಖ್ಯೆ:0824-2423619/2441269, 9480843114, ಬಂಟ್ವಾಳ ತಾಲೂಕು, ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ ದೂ.ಸಂಖ್ಯೆ: 08255-230968, 9480843112, ಬೆಳ್ತಂಗಡಿ ತಾಲೂಕು, ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ ದೂ.ಸಂಖ್ಯೆ: 08256-233528, 9480843113, ಪುತ್ತೂರು ತಾಲೂಕು, ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ ದೂ.ಸಂಖ್ಯೆ: 08251-236803, 9480843115, ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ ದೂ.ಸಂಖ್ಯೆ: 08257-233527, 9480843116 ಅನ್ನು ಸಂಪರ್ಕಿಸಬಹುದಾಗಿದೆ.

ಫ್ರೀ ಶಿಪ್ ಕಾರ್ಡ್: ಇಲಾಖೆಯು ವಿನೂತನ ಕಾರ್ಯಕ್ರಮ ಫ್ರೀ ಶಿಪ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಇದರಿಂದ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫ್ರೀ ಶಿಪ್ ಕಾರ್ಡ್‌ನ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡುವ ಸಂದರ್ಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳಿಂದ ವಿದ್ಯಾರ್ಥಿ ವೇತನ ನಿಗಧಿತ ಸಮಯದಲ್ಲಿ ಮಂಜೂರು ಮಾಡಲು ತೊಂದರೆಯಾದಾಗ ವಿದ್ಯಾರ್ಥಿಗಳು ಸಂಬಂಧಪಟ್ಟ ಕಾಲೇಜುಗಳಿಂದ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಫ್ರೀ ಶಿಪ್ ಕಾರ್ಡ್‌ನ್ನು ಬಳಸಿಕೊಂಡು ವಿದ್ಯಾರ್ಥಿಗಳು ಕೋರ್ಸ್ ಅನ್ನು ಪೂರ್ಣಗೊಳಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News