ದ.ಕ. ಜಿಲ್ಲೆ : ಕೋವಿಡ್‌ಗೆ ಓರ್ವ ಬಲಿ, 13 ಮಂದಿಗೆ ಸೋಂಕು

Update: 2021-11-16 14:10 GMT

ಮಂಗಳೂರು, ನ.16: ದ.ಕ. ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಸೋಂಕಿಗೆ ಓರ್ವ ಬಲಿಯಾಗಿದ್ದು, ಹೊಸದಾಗಿ 13 ಮಂದಿಗೆ ಸೋಂಕು ದೃಢಪಟ್ಟಿದೆ. 8 ಮಂದಿ ಗುಣಮುಖರಾಗಿದ್ದಾರೆ.

ಪಾಸಿಟಿವಿಟಿ ದರ ಶೇ.0.31 ದಾಖಲಾಗಿದೆ. 1,15,691 ಸೋಂಕಿತರ ಪೈಕಿ 1,13,871ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ನಿಂದಾಗಿ 1,693 ಮಂದಿ ಮೃತಪಟ್ಟಿದ್ದಾರೆ. ಸದ್ಯ 127 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ 88,730 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು,1,07,65,970ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News