ಕಾಪು ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣೆ

Update: 2021-11-16 17:23 GMT

ಕಾಪು : ಪ್ರತಿಷ್ಠಿತ ಮಣಿಪಾಲ ಆಸ್ಪತ್ರೆಯ ಮಣಿಪಾಲ ಆರೋಗ್ಯ ಕಾರ್ಡ್ 2021ರನ್ನು ಕಾಪು ತಾಲ್ಲೂಕಿನ ಪತ್ರಕರ್ತರಿಗೆ ಮಂಗಳವಾರ ಕಾಪು ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ, ಮಣಿಪಾಲ ಆರೋಗ್ಯಕಾರ್ಡ್  ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಆರಂಭಿಸಲಾಯಿತು. 
ಮಣಿಪಾಲ್ ಕಾರ್ಡ್ ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಈ ವರ್ಷದ ದ್ಯೇಯ ವಾಕ್ಯ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿಯನ್ನು  ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕಾರ್ಡ್‍ನ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಹಿಂಪಡೆಯಬಹುದು.  ಮಣಿಪಾಲ ಆರೋಗ್ಯಕಾರ್ಡಿನ 21 ನೇ ವರ್ಷವು ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯನ್ನು ಒಳಗೊಂಡಿದೆ ಎಂದರು. 

ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2021 ರ ನೋಂದಾವಣೆಯನ್ನು 30ನೇ ನವೆಂಬರ್ 2021 ರವರೆಗೆ ವಿಸ್ತರಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಹಲವು ರಿಯಾಯಿತಿ ಸೌಲಭ್ಯ ಪಡೆಯಬಹುದು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ  ಮಣಿಪಾಲ ಆಸ್ಪತ್ರೆ ಕಟೀಲ್  ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ,  ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ  ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದು ಹೇಳಿದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕ ಮೋಹನ್ ಶೆಟ್ಟಿ  ಹಾಗೂ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಚೇತನ್, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ್ ಕುಂಜೂರು, ಕಾರ್ಯದರ್ಶಿ ಶಫಿ ಉಚ್ಚಿಲ, ಕೋಶಾಧಿಕಾರಿ ಪುಂಡಲೀಕ ಮರಾಠೆ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News