ಮಂಗಳೂರಿನ ಎರಡು ನ್ಯಾಯಾಲಯಗಳಿಗೆ ಚೆಕ್ ಅಮಾನ್ಯ ಪ್ರಕರಣಗಳ ವಿಚಾರಣೆ ನಡೆಸಲು ಅಧಿಸೂಚನೆ

Update: 2021-11-17 16:56 GMT

ಮಂಗಳೂರು, ನ.17; ಮಂಗಳೂರಿನ ಐದನೇ ಜೆಎಂಎಫ್‌ಸಿ ನ್ಯಾಯಾಲಯದೊಂದಿಗೆ ಎಂಟು ಮತ್ತು ಒಂಬತ್ತನೇ ಜೆಎಂಎಫ್‌ಸಿ ನ್ಯಾಯಾಲಯವೂ (ನೆಗೋಷಿಯೆಬಲ್ ಇನ್ಸ್‌ಟ್ರುಮೆಂಟ್ ಕಾಯ್ದೆ ಅಡಿ )ಚೆಕ್ ಅಮಾನ್ಯ ಪ್ರಕರಣಗಳ ವಿಚಾರಣೆ ನಡೆಸುವ  ಅಧಿಕಾರದ ಬಗ್ಗೆ ರಾಜ್ಯ ಕಾನೂನು ಸಚಿವಾಲ ಯದ ಅಧಿಸೂಚನೆ ಹೊರಡಿಸಿದೆ.

ಐದನೇ ಜೆಎಂಎಫ್‌ಸಿ ನ್ಯಾಯಾಲಯವು ಮಂಗಳೂರು ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಚೆಕ್ ಅಮಾನ್ಯ ಪ್ರಕರಣಗಳ ವಿಚಾರಣೆ ನಡೆಸಲಿದೆ.

ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಸುರತ್ಕಲ್, ಕಾವೂರು, ಪಣಂಬೂರು ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಚೆಕ್ ಅಮಾನ್ಯ ಪ್ರಕರಣಗಳ ವಿಚಾರಣೆ ನಡೆಸಲಿದೆ.

ಒಂಬತ್ತನೇ ಜೆಎಂಎಫ್‌ಸಿ ನ್ಯಾಯಾಲಯವೂ ಮಂಗಳೂರು ನ್ಯಾಯಾಲಯದ ವ್ಯಾಪ್ತಿಗೆ ಬರುವ (ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ )ಉಳಿದ ಪ್ರಕರಣಗಳ ವಿಚಾರಣೆ ನಡೆಸಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News