ಮಂಗಳೂರು: ಚಿನ್ನ ​ಅಕ್ರಮ ಸಾಗಾಟ ಪತ್ತೆ:

Update: 2021-11-19 14:35 GMT

ಮಂಗಳೂರು, ನ.19: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ 34.32 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಪತ್ತೆ ಮಾಡಿದ್ದಾರೆ.

ಶುಕ್ರವಾರ ಬೆಳಗ್ಗಿನ ಜಾವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಬಂದಿಳಿದ ಸುಳ್ಯ ಮೂಲದ ಪ್ರಯಾಣಿಕನ ಬಳಿಯಿಂದ 681 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ತಪಾಸಣೆ ವೇಳೆ ಮೂರು ಕ್ಯಾಪ್ಸೂಲ್‌ಗಳಲ್ಲಿ ಚಿನ್ನ ಪತ್ತೆಯಾಗಿದೆ ಎಂದು ಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News