ದ.ಕ. ಜಿಲ್ಲೆ: 16 ಮಂದಿಗೆ ಕೋವಿಡ್ ಪಾಸಿಟಿವ್
Update: 2021-11-22 14:54 GMT
ಮಂಗಳೂರು, ನ. 22: ದ.ಕ.ಜಿಲ್ಲೆಯಲ್ಲಿ ಸೋಮವಾರ 16 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 9 ಮಂದಿ ಗುಣಮುಖರಾಗಿದ್ದಾರೆ. ಯಾರೂ ಸೋಂಕಿಗೆ ಬಲಿಯಾಗಿಲ್ಲ. ಪಾಸಿಟಿವ್ ದರ ಶೇ.0.39 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 22,10,033 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 20,94,277 ನೆಗೆಟವ್ ಮತ್ತು 1,15,756 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,13,961 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1692 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 103 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 88,828 ಪ್ರಕರಣ ದಾಖಲಿಸಿ, 1,07,75,670 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.