ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಿಸಲು ಸೂಚನೆ

Update: 2021-11-23 14:28 GMT

ಮಂಗಳೂರು, ನ.23: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮೊತ್ತವೂ ಮಂಜೂರಾಗಿದೆ.

ಆದರೆ ಕೆಲವು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯಾಗದ ಕಾರಣ ಮಂಜೂರಾದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲು ಅಡಚಣೆ ಉಂಟಾಗಿದೆ. ಇಂತಹ ವಿದ್ಯಾರ್ಥಿಗಳು ಕೂಡಲೇ ಸಂಬಂಧಪಟ್ಟ ಬ್ಯಾಂಕ್‌ಗಳನ್ನು ಸಂಪರ್ಕಿಸಿ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿ, ಎನ್‌ಪಿಸಿಐನಲ್ಲಿ ಮ್ಯಾಪಿಂಗ್‌ ಮಾಡಿಸಬೇಕು.

ಆಧಾರ್‌ನಲ್ಲಿ ನಮೂದಾಗಿರುವ ಹೆಸರು ಹೊಂದಾಣಿಕೆ ಆಗಿರುವ ವಿದ್ಯಾರ್ಥಿಗಳು ತಮ್ಮ ಎಸೆಸೆಲ್ಸಿ ಅಂಕಪಟ್ಟಿಯಲ್ಲಿರುವಂತೆ ಆಧಾರ್‌ ಕಾರ್ಡ್‌ನಲ್ಲಿಯೂ ಕೂಡ ತಮ್ಮ ಹೆಸರನ್ನು ತಿದ್ದುಪಡಿ ಮಾಡಿಸಬೇಕು, ತಪ್ಪಿದ್ದಲ್ಲಿ ಅವರಿಗೆ ಮಂಜೂರಾಗಿರುವ ಶುಲ್ಕ ವಿನಾಯಿತಿ ಮೊತ್ತವು ತನ್ನಿಂತಾನೆ ರದ್ದಾಗುವುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News