ಉಡುಪಿ: ಡಿಜಿಟಲ್ ಸೇವಾ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ

Update: 2021-11-23 15:02 GMT

ಉಡುಪಿ, ನ.23: ಉಡುಪಿ ಜಿಲ್ಲೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಡಿಜಿಟಲ್ ಸೇವಾ ಸಾಮಾನ್ಯ ಸೇವಾ ಕೇಂದ್ರವನ್ನು ಮಂಗಳವಾರ ಶಾಸಕ ಕೆ.ರಘುಪತಿ ಭಟ್ ಅಂಬಲಪಾಡಿಯ ಪ್ರಗತಿಸೌಧದಲ್ಲಿ ಉದ್ಘಾಟಿಸಿ, ನಾಮಫಲಕ ಅನಾವರಣಗೊಳಿಸಿದರಲ್ಲದೇ ಸಾಂಕೇತಿಕವಾಗಿ ಇ-ಶ್ರಮ್ ಕಾರ್ಡ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ತಾಲೂಕು ಯೋಜನಾಧಿಕಾರಿ ರಾಮ್ ಎಂ., ಕೇಂದ್ರ ಸರಕಾರದೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಒಡಂಬಡಿಕೆಯಂತೆ ರಾಜ್ಯದಲ್ಲಿ ಸುಮಾರು 10 ಸಾವಿರ ಡಿಜಿಟಲ್ ಸೇವಾ ಕೇಂದ್ರಗಳನ್ನು (ಸಿಎಸ್‌ಸಿ) ತೆರೆದು, ಕ್ಷಣಾರ್ಧದಲ್ಲೇ ಗ್ರಾಹಕರಿಗೆ ಸೇವೆಯನ್ನು ಕಲ್ಪಿಸುತ್ತೇವೆ ಎಂದರು.

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಿಎಸ್‌ಸಿ ಕೇಂದ್ರ ತೆರೆಯುತ್ತೇವೆ. ಈ ಕೇಂದ್ರಗಳ ಮೂಲಕ ತ್ವರಿತವಾಗಿ ಗ್ರಾಹಕರಿಗೆ ಸೇವೆ ನೀಡುತ್ತೇವೆ. ಪಡಿತರ ಚೀಟಿ ಸಹಿತ ಕೆಲವೊಂದು ಸವಲತ್ತುಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಉಡುಪಿ ಜಿಲ್ಲೆ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮೀನ್ ಇ-ಶ್ರಮ್ ಕಾರ್ಡ್ ವಿತರಣೆ ಮಾಡಿದರು. ಉಡುಪಿ ಜಿಲ್ಲೆ ಹಿರಿಯ ನಿರ್ದೇಶಕ ಗಣೇಶ್ ಬಿ., ಪ್ರಾದೇಶಿಕ ಕಚೇರಿ ಆಡಳಿತ ಯೋಜನಾಧಿಕಾರಿ ಪುರಂದರ ಪೂಜಾರಿ ಉಪಸ್ಥಿತರಿದ್ದರು.

ಗೀತಾ ಪಾಲನ್ ಪ್ರಾರ್ಥಿಸಿದರು. ಕೇಂದ್ರ ಒಕ್ಕೂಟದ ಅಧ್ಯಕ್ಷೆ ಶಮಿತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಯಕರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News