ಪುತ್ರನಿಗೆ ಕಾಂಗ್ರೆಸ್ ಟಿಕೆಟ್: ಎ.ಮಂಜುವನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಿದ ಬಿಜೆಪಿ
ಬೆಂಗಳೂರು: ಸ್ಥಳೀಯ ಸಂಸ್ಥೆ ಮೂಲಕ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಸೋಮವಾರ ಸಂಜೆ ಕಾಂಗ್ರೆಸ್ ಬಿಡುಗಡೆಗೊಳಿಸಿದ 20ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿಜೆಪಿ ನಾಯಕ, ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎ.ಮಂಜು ಅವರ ಪುತ್ರ ಡಾ.ಮಂಥರ್ ಗೌಡ ಗೌಡ ಅವರಿಗೆ ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಕ್ಕಿರುವುದು ಅಚ್ಚರಿ ಮೂಡಿಸಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಎ.ಮಂಜು ಅವರು ಬಿಜೆಪಿಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದರೂ ಅವರ ಪುತ್ರ ಡಾ.ಮಂತರ್ ಗೌಡ ಕಾಂಗ್ರೆಸ್ ನಿಂದ ಕಣಕ್ಕಿಳಿದಿರುವುದು ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಮುಜುಗರ ಉಂಟು ಮಾಡಿದೆ ಎನ್ನಲಾಗಿದೆ.
ಇದೀಗ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್, ಎ.ಮಂಜುಗೆ ಪತ್ರ ಬರೆದಿದ್ದು, ಇತ್ತೀಚಿನ ಬೆಳವಣಿಗೆಗಳಿಂದ ಕೆಲವು ಸಂಶಯಗಳು ಉಂಟಾಗಿವೆ. ಈ ಕಾರಣದಿಂದ ಪಕ್ಷದ ಮಂಡ್ಯ ಜಿಲ್ಲೆಯ ಪ್ರಭಾರಿ, ಮತ್ತುಳಿದ ಎಲ್ಲ ಜವಾಬ್ದಾರಿಗಳಿಂದ ನಿಮ್ಮನ್ನು ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.