ಸಂವಿಧಾನವು ಕೇವಲ ಕಾಗದವಾಗದಂತೆ ನೋಡಿಕೊಳ್ಳಬೇಕು: ರಾಹುಲ್ ಗಾಂಧಿ

Update: 2021-11-26 09:14 GMT

ಹೊಸದಿಲ್ಲಿ: ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಂವಿಧಾನವು ಕೇವಲ ಕಾಗದವಾಗದಂತೆ ನೋಡಿಕೊಳ್ಳಬೇಕು. ಎಲ್ಲರಿಗೂ ನ್ಯಾಯ ಮತ್ತು ಹಕ್ಕುಗಳನ್ನು ಸಮಾನವಾಗಿ ಖಾತ್ರಿಪಡಿಸಬೇಕು. ಅದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ'' ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವಂಶಾಡಳಿತ ರಾಜಕೀಯದ ಬಗ್ಗೆ ತಮ್ಮ ಹೇಳಿಕೆಗಳ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ರಾಹುಲ್ ಅವರ ಹೇಳಿಕೆ ಬಂದಿವೆ.

ಸಂವಿಧಾನ ದಿನದ ಅಂಗವಾಗಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಒಂದು ಕುಟುಂಬವು ಹಲವು ತಲೆಮಾರುಗಳಿಂದ ಪಕ್ಷವನ್ನು ನಡೆಸಿದರೆ ಅದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ" ಎಂದು ಹೇಳಿದರು.

ಇದಕ್ಕೂ ಮುನ್ನ ಶುಕ್ರವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಸಂವಿಧಾನ ದಿನಾಚರಣೆಯನ್ನು ಬಹಿಷ್ಕರಿಸಲು ಕಾಂಗ್ರೆಸ್ ಮತ್ತು ಆರ್‌ಜೆಡಿ, ಡಿಎಂಕೆ, ಸಿಪಿಎಂ, ಸಿಪಿಐ ಸೇರಿದಂತೆ ಹಲವು ವಿರೋಧ ಪಕ್ಷಗಳು ನಿರ್ಧರಿಸಿದ್ದವು  ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳನ್ನು ತಲುಪಿ ಕಾರ್ಯಕ್ರಮವನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News