ಉಡುಪಿ ಪರ್ಯಾಯ: ನಗರದ ರಸ್ತೆಗಳ ಅಭಿವೃದ್ಧಿಗೆ ಚುನಾವಣಾ ಆಯೋಗ ಅನುಮತಿ

Update: 2021-11-26 14:49 GMT

ಉಡುಪಿ, ನ.26: ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದು, ಆದುದ ರಿಂದ ಉಡುಪಿ ನಗರಸಭೆ ಅನುದಾನದಲ್ಲಿ ನಗರದ ರಸ್ತೆಗಳ ಅಭಿವೃದ್ಧಿ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನೀಡಿದೆ.

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿರುವುದರಿಂದ ಈಗಾ ಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಟೆಂಡರ್ ಕರೆದು ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಆದರೆ 2022ನೇ ಜನವರಿ 18 ರಿಂದ ಉಡುಪಿ ಪರ್ಯಾಯ ನಡೆಯಲಿರುವುದರಿಂದ ಉಡುಪಿ ನಗರದ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳನ್ನು ನಗರಸಭೆ ವತಿಯಿಂದ ತಕ್ಷಣದಲ್ಲಿ ಟೆಂಡರ್ ಕರೆದು ಕೈಗೆತ್ತಿಕೊಳ್ಳಬೇಕಾಗಿದೆ.

ಈ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಮತಿ ನೀಡುವಂತೆ ನಗರ ಸಭೆ ವತಿಯಿಂದ ಜಿಲ್ಲಾಧಿಕಾರಿಯವರ ಮೂಲಕ ಚುನಾವಣಾ ಆಯೋಗದ ಅನುಮತಿ ಕೋರಲಾಗಿತ್ತು. ಇದಕ್ಕೆ ಚುನಾವಣಾ ಆಯೋಗ ಅನುಮತಿ ಕಲ್ಪಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News