ಜನರಲ್ ಬಿಪಿನ್ ರಾವತ್ ಅವರ ಪುತ್ರಿಯರು, ಮೊಮ್ಮಗನಿಂದ ಪುಷ್ಪ ನಮನ

Update: 2021-12-10 09:13 GMT

ಹೊಸದಿಲ್ಲಿ: ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಪುತ್ರಿಯರಾದ ಕೃತಿಕಾ ಹಾಗೂ  ತಾರಿಣಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪೋಷಕರಿಗೆ ಪುಷ್ಪ ನಮನ ಸಲ್ಲಿಸಿದರು.

ಸಿಡಿಎಸ್ ನ ಮೊಮ್ಮಗ ಕೂಡ  ಅಜ್ಜ-ಅಜ್ಜಿಯರಿಗೆ ಅಂತಿಮ ನಮನ ಸಲ್ಲಿಸಿದರು.

ಬುಧವಾರ ತಮಿಳುನಾಡಿನ ಕುನ್ನರ್‌ನಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ 13 ಜನರ ಪೈಕಿ ಜನರಲ್ ಬಿಪಿನ್ ರಾವತ್ ಹಾಗೂ  ಅವರ ಪತ್ನಿ ಮಧುಲಿಕಾ ರಾವತ್ ಕೂಡ ಸೇರಿದ್ದಾರೆ.

ಇದೇ ವೇಳೆ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ  ಹರೀಶ್ ಸಿಂಗ್ ರಾವತ್, ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಡಿಎಂಕೆ ನಾಯಕರಾದ ಎ.ರಾಜಾ ಮತ್ತು ಕನಿಮೋಳಿ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಸಿಡಿಎಸ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಗೆ ಅಂತಿಮ ನಮನ ಸಲ್ಲಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News