ಕಾರವಾರ; ಹೆದ್ದಾರಿಯಲ್ಲೇ ಹೊತ್ತಿ ಉರಿದ ಬಸ್

Update: 2021-12-16 06:30 GMT

ಕಾರವಾರ : ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ.

ಮುಂಬೈ ನಿಂದ ಮಂಗಳೂರು ಕಡೆ ಬಸ್ ಸಂಚರಿಸುತ್ತಿದ್ದು, 22 ಮಂದಿ ಪ್ರಯಾಣಿಸುತಿದ್ದರು. ಈ ವೇಳೆ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗಲಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಯಲ್ಲಾಪುರ ಪೊಲೀಸ್ ಠಾಣೆ ಪ್ಯಾಪ್ತಿಯಲ್ಲಿ ನಡೆದಿದಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News