ಉಡುಪಿ: ಪ್ಯಾರಾ ಸಿಟ್ಟಿಂಗ್ ರಾಷ್ಟ್ರೀಯ ವಾಲಿಬಾಲ್ ಟೂರ್ನಿಗೆ ಚಾಲನೆ

Update: 2021-12-16 15:14 GMT

ಉಡುಪಿ, ಡಿ.16: ಪ್ಯಾರಾಲಿಂಪಿಕ್ ವಾಲಿಬಾಲ್ ಫೆಡರೇಷನ್ ಆಫ್ ಇಂಡಿಯಾ, ಉಡುಪಿ ಜಿಲ್ಲಾಡಳಿತ, ಜಿಪಂ, ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317ಸಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 10ನೇ ರಾಷ್ಟ್ರೀಯ ಪುರುಷರ ಮತ್ತು ಮಹಿಳೆಯರ ಪ್ಯಾರಾ ಸಿಟ್ಟಿಂಗ್ ವಾಲಿಬಾಲ್ ಚಾಂಪಿಯನ್‌ ಷಿಪ್ ಇಂದು ಸಂಜೆ ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.

ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್ ಕ್ರೀಡಾ ಕೂಟವನ್ನು ಉದ್ಘಾಟಿಸಿ, ಅಧಿಕೃತ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ನಗರ ಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಭಾಗವಹಿಸಿದ್ದರು.

ವಿಶೇಷ ಆಹ್ವಾನಿತರಾಗಿ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಣನಾಥ ಎಕ್ಕಾರು, ಲಯನ್ಸ್ ಕ್ಲಬ್‌ನ ಕ್ರೀಡಾ ಸಂಯೋಜಕಿ ಗಿರಿಜಾ ಶಿವರಾಮ ಶೆಟ್ಟಿ, ಜಯಾ ಜಿ ಬಂಗೇರ, ಭಾರತಿ ಎಚ್ ಸುವರ್ಣ ಆಗಮಿಸಿದ್ದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ಡಾ.ರೋಶನ್‌ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ಯಾರಾ ವಾಲಿಬಾಲ್ ಫೆಡರೇಷನ್‌ನ ಅಧ್ಯಕ್ಷ ಎಚ್.ಚಂದ್ರಶೇಖರ್ ಪ್ರಾಸ್ತಾವಿಕ ಮಾತನಾಡಿರು.

ನಾಲ್ಕು ದಿನಗಳ ಕಾಲ ನಡೆಯುವ ಟೂರ್ನಿಯಲ್ಲಿ ದೇಶದ ಒಟ್ಟು 10 ಪುರುಷರ- ಆತಿಥೇಯ ಕರ್ನಾಟಕ, ರಾಜಾಸ್ಥಾನ, ಆಂಧ್ರ ಪ್ರದೇಶ, ತೆಲಂಗಾಣ, ತುಮಿಳುನಾಡು, ಉತ್ತರಾಖಂಡ, ಬಿಹಾರ, ಹರ್ಯಾಣ, ಪಾಂಡಿಚೇರಿ ಹಾಗೂ ಪಶ್ಚಿಮ ಬಂಗಾಳ- ಹಾಗೂ ಐದು ಮಹಿಳಾ ತಂಡಗಳು ಭಾಗವಹಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News