ದಿಲ್ಲಿಯಲ್ಲಿ ಒಂದೇ ದಿನ 10 ಒಮೈಕ್ರಾನ್ ಪ್ರಕರಣ ವರದಿ

Update: 2021-12-17 07:17 GMT

ಹೊಸದಿಲ್ಲಿ: ಸುಮಾರು ನಾಲ್ಕು ತಿಂಗಳುಗಳಲ್ಲಿ ಕೊರೊನಾವೈರಸ್ ಪ್ರಕರಣಗಳಲ್ಲಿ ದಿನನಿತ್ಯದ ತೀವ್ರ ಏರಿಕೆಯನ್ನು ಕಂಡ ಒಂದು ದಿನದ ನಂತರ ಶುಕ್ರವಾರ ಬೆಳಗ್ಗೆ ದಿಲ್ಲಿಯಲ್ಲಿ ಹತ್ತು ಹೊಸ ಒಮೈಕ್ರಾನ್ ಪ್ರಕರಣಗಳು ದಾಖಲಾಗಿವೆ.

ಭಾರತದಾದ್ಯಂತ, ಹೊಸ ರೂಪಾಂತರದ 90 ಕ್ಕೂ ಹೆಚ್ಚು ಪ್ರಕರಣಗಳು ಇಲ್ಲಿಯವರೆಗೆ ದಾಖಲಾಗಿವೆ. ಈ ಪೈಕಿ 20 ಪ್ರಕರಣಗಳು ರಾಷ್ಟ್ರ ರಾಜಧಾನಿಯೊಂದರಲ್ಲೇ ದಾಖಲಾಗಿವೆ.

ಮಹಾರಾಷ್ಟ್ರದಲ್ಲಿ ಇದುವರೆಗೆ 32 ಒಮೈಕ್ರಾನ್ ಪ್ರಕರಣಗಳು ವರದಿಯಾಗಿವೆ. ಕರ್ನಾಟಕ, ಗುಜರಾತ್, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶ  ಒಮೈಕ್ರಾನ್  ಪ್ರಕರಣಗಳು ದಾಖಲಾಗಿರುವ ಇತರ ರಾಜ್ಯಗಳಾಗಿವೆ.

ಕರ್ನಾಟಕದಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಇನ್ನೂ ಐದು ಹೊಸ ರೂಪಾಂತರದ ಪ್ರಕರಣಗಳು ಪತ್ತೆಯಾಗಿದ್ದು, ಹೊಸ ತಳಿಯ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News