ಉಡುಪಿ: ಐವರಲ್ಲಿ ಕೋವಿಡ್ ಸೋಂಕು ಪತ್ತೆ

Update: 2021-12-17 13:21 GMT

ಉಡುಪಿ, ಡಿ.17: ಶುಕ್ರವಾರ ಜಿಲ್ಲೆಯಲ್ಲಿ ಹೊಸದಾಗಿ ಐವರಲ್ಲಿ ಕೋವಿಡ್- 19 ಸೋಂಕು ಪತ್ತೆಯಾಗಿದೆ. ದಿನದಲ್ಲಿ ಐವರು ರೋಗದಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 28 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದವರಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು. ಎಲ್ಲಾ ಐವರು ಉಡುಪಿ ತಾಲೂಕಿನವರಾಗಿದ್ದಾರೆ. ಇವರಲ್ಲಿ ಒಬ್ಬರಿಗೆ ಆಸ್ಪತ್ರೆ ಹಾಗೂ ಉಳಿದ ನಾಲ್ವರಿಗೆ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾ ಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.

ಗುರುವಾರ ಸೋಂಕಿನಿಂದ ಐವರು ಗುಣಮುಖರಾಗುವ ಮೂಲಕ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,467ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 1283 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,972ಕ್ಕೇರಿದೆ.

3809 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 3,809 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 359 ಮಂದಿ ಮೊದಲ ಡೋಸ್ ಹಾಗೂ 3450 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 244 ಮಂದಿ ಮೊದಲ ಡೋಸ್ ಹಾಗೂ 2274 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 115 ಮಂದಿ ಮೊದಲ ಡೋಸ್ ಹಾಗೂ 1173 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಇವರೊಂದಿಗೆ ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ ಒಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News