ಮಂಗಳೂರು: ಮೆಗಾ ಲೋಕ ಅದಾಲತ್‌ನಲ್ಲಿ 3,802 ಪ್ರಕರಣಗಳು ಇತ್ಯರ್ಥ

Update: 2021-12-18 16:58 GMT

ಮಂಗಳೂರು, ಡಿ.18: ದ.ಕ.ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ 3,802 ಪ್ರಕರಣಗಳು ಇತ್ಯರ್ಥಗೊಂಡಿವೆ.

ಎನ್‌ಐ (ನೆಗೋಷಿಯೆಬಲ್ ಇನ್‌ಸ್ಟ್ರುಮೆಂಟ್) ಪ್ರಕರಣಗಳ ಪೈಕಿ 333 ಪ್ರಕರಣಗಳು ಇತ್ಯರ್ಥವಾಗಿದ್ದು, 8,82,00,394 ರೂ.ಗಳ ಪರಿಹಾರ ಮೊತ್ತ ಮತ್ತು 224 ವಾಹನ ಅಪಘಾತ ಪ್ರಕರಣಗಳಲ್ಲಿ 8,14,46,622 ರೂ.ಗಳ ಪರಿಹಾರದ ಮೊತ್ತವನ್ನು ಸಂಬಂಧಿಸಿದವರಿಗೆ ಪಾವತಿಸಲು ಇತ್ಯರ್ಥ ಪಡಿಸಲಾಯಿತು. 2,710 ಕ್ರಿಮಿನಲ್ ಪ್ರಕರಣಗಳಲ್ಲಿ 11,49,050 ರೂ.ಗಳ ದಂಡದ ಮೊತ್ತವನ್ನು ಪರಿಹಾರವಾಗಿ ಸರಕಾರಕ್ಕೆ ಪಾವತಿಸಲು ಕ್ರಮ ವಹಿಸಲಾಗಿದೆ.

ಅದಾಲತ್‌ನಲ್ಲಿ 1,60,63,527 ರೂ.ಗಳ 117 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಅವುಗಳಲ್ಲಿ ಮಂಗಳೂರು ತಾಲೂಕಿನ 95 ಹಾಗೂ ಇತರೆ ತಾಲೂಕಿನ 22 ಪ್ರಕರಣಗಳಿವೆ.ಸಿವಿಲ್ ಪ್ರಕರಣಕ್ಕೆ ಸಂಬಂಧಿಸಿದ 57 ವಿಭಾಗ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಲೋಕ್ ಅದಾಲತ್‌ನಲ್ಲಿ ಅವಕಾಶ ಕಲ್ಪಿಸಲಾಗಿತ್ತು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಿಥ್ವಿರಾಜ್ ವರ್ಣೇಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News